ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಗೌರವ ಸೂಚಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಚೂಂತಾರ್ ಸರೋಜಿನಿ ಭಟ್ ಪ್ರತಿಷ್ಠಾನ ಹಾಗೂ ಶ್ರೀ ಭಾರತೀ ಸಮೂಹ ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಾಹಿತಿ ಕಾರ್ಯಗಾರದಲ್ಲಿ ಉದ್ಘಾಟನೆಯನ್ನು ನೆರವೇರಿಸಿದ ಡಾ ಮುರುಳಿ ಮೋಹನ ಚೂಂತಾರ್‍ರವರು ನುಡಿದರು.
ರಾಷ್ಟ್ರಧ್ವಜದ ಮಹತ್ವ ಅದು ಬೆಳೆದು ಬಂದ ಬಗ್ಗೆ ಎಲ್ಲಿ ಸಿದ್ದವಾಗುತ್ತದೆ ಹಾಗೂ ರಾಷ್ಟ್ರಗೀತೆಯನ್ನು ಹಾಡುವ ಸಂಪೂರ್ಣ ಮಾಹಿತಿಯನ್ನು ಭಾರತ ಸೇವಾದಳದ ಸಂಯೋಜಕರುಗಳಾದ ಮಹೇಶ್ ಎನ್ ಪತ್ತಾರ್ ಹಾಗೂ ಅಲ್ಫಾಫಾನ್ಸೋ ಪ್ರೆಂಕೋ ಎಲ್ಲಿನ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಕೆಯ ಮೂಲಕ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ವಿದ್ಯಾಭಟ್ ವಹಿಸಿದ್ದರು. ಉಪನ್ಯಾಸಕ ಶ್ರೀ ಅನಂತ ನಾರಾಯಣ ಪದಕಣ್ಣಾಯ ಕಾರ್ಯಕ್ರಮವನ್ನು ನಿರೂಪಿಸಿದರು.
ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
No Comment
You can post first response comment.