Dr. Muralee - 09845135787
Dr. Rajashree - 0945548807

ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ ಜನರಿಗೆ ತಲುಪಿಸುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. […]

Read More

ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ನಿಫಾ ವೈರಾಣುಗಳು ಬಾವಲಿಗಳ ಮುಖಾಂತರ ಮನುಷ್ಯನಿಗೆ ಹರಡುವ ಕಾರಣದಿಂದಲೇ ಈ ವೈರಲ್ ಜ್ವರಕ್ಕೆ ಬಾವಲಿ ಜ್ವರ ಎಂಬ ಅನ್ವರ್ಥ ನಾಮ ಬಂದಿದೆ. 1998ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ “ಕಾಮ್ಟಂಗ್ ಸುಂಗೈ ನಿಫಾ” ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ […]

Read More

ಪ್ರತಿ ವರ್ಷ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ಎಂದು ಆಚರಿಸಲಾಗುತ್ತಿದೆ. ವಿಶ್ವದಾದ್ಯಂತ ಅಸ್ತಮಾ ರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸಿ, ರೋಗದ ಬಗ್ಗೆ ಜಾಗೃತಿ ಮೂಡಿಸಿ, ರೋಗಿಗಳಿಗೆ ಆತ್ಮಸ್ತೈರ್ಯವನ್ನು ನೀಡುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ಮುಖ್ಯವಾಗಿ ರೋಗಿಯ ಉಸಿರಾಟದ ಪ್ರಕ್ರಿಯೆ ಮೇಲೆ ತೊಂದರೆಯನ್ನು ಉಂಟುಮಾಡುತ್ತದೆ. ರೋಗದ ತೀವ್ರತೆ ಮತ್ತು ಕೆರಳುವಿಕೆ ವ್ಯಕ್ತಿಯಿಂದ ವ್ಯಕ್ತಿಗೆ ಬಿನ್ನವಾಗಿದ್ದು, ಅಸ್ತಮಾ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲಾಗದಿದ್ದರೂ, ನಿರಂತರವಾದ ಚಿಕಿತ್ಸೆ, […]

Read More