Dr. Muralee - 09845135787
Dr. Rajashree - 0945548807

ವಿಶ್ವದಾದ್ಯಂತ ಮಾರ್ಚ್ 24 ರಂದು “ವಿಶ್ವ ಕ್ಷಯ ರೋಗ ದಿನ” ಎಂದು ಆಚರಿಸಲಾಗುತ್ತಿದೆ. ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ 1982ರಿಂದ ಜಾರಿಗೆ ತಂದಿತು. ಪ್ರತಿ ವರ್ಷ ಯಾವುದಾದರೊಂದು ಧ್ಯೇಯ ಇಟ್ಟುಕೊಂಡು ಈ ಆಚರಣೆ ಮಾಡಲಾಗುತ್ತಿದ್ದು, 2014ರಲ್ಲಿ ಮೂರು ಮಿಲಿಯನ್ ಕ್ಷಯ ರೋಗಿಗಳನ್ನು ತಲುಪುವ ಧ್ಯೇಯವನ್ನು ಹೊಂದಿತ್ತು ಪ್ರತಿ ವರ್ಷ ಸುಮಾರು 9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು, ಮೂರು ಮಿಲಿಯನ್ ರೋಗಿಗಳಿಗೆ ಯಾವುದೇ ರೀತಿಯ ಚಿಕಿತ್ಸಾ […]

Read More

ಪ್ರತಿ ವರ್ಷ ಮಾರ್ಚ್ 20ರಂದು “ವಿಶ್ವ ಬಾಯಿಯ ಆರೋಗ್ಯ ದಿನ” ಎಂದು ಆಚರಿಸಲಾಗುತ್ತಿದ್ದು, ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು, ಬಾಯಿಯ ಆರೋಗ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಧನಾತ್ಮಕವಾದ ವಿಚಾರಧಾರೆಗಳನ್ನು ಮೂಡಿಸಲು ಮತ್ತು ಬಾಯಿಯ ಆರೋಗ್ಯದಿಂದ, ದೇಹದ ಆರೋಗ್ಯದ ಮತ್ತು ವ್ಯಕ್ತಿಯ ವ್ಯಕ್ತಿತ್ವದ ಮೇಲಾಗುವ ಪರಿಣಾಮಗಳ ಬಗ್ಗೆ ಹೊಸ ಚಿಂತನೆಗಳನ್ನು ಮೂಡಿಸುವ ಸಮದ್ದೇಶವನ್ನು ಈ ಆಚರಣೆ ಹೊಂದಿದೆ. ಈ ಆಚರಣೆ 2007ರಲ್ಲಿ FDI (ಅಂತರಾಷ್ಟ್ರೀಯ ದಂತ ಸಂಘ) ಆಚರಣೆಗೆ ತಂದಿತು. FDI ಇದರ ಜನಕರಾದ ಚಾರ್ಲ್‍ಗೊಡನ್ ಅವರು ಹುಟ್ಟಿದ […]

Read More

ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಅಂಗವಾಗಿ ಮಾರ್ಚ್ 20ರಂದು ಕೊಂಚಾಡಿಯ ಶ್ರೀ ರಾಮಾಶ್ರಮ ಸರಕಾರಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ದಂತ ಆರೋಗ್ಯ ಮಾಹಿತಿ ಶಿಬಿರ ಜರುಗಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ ಈ ಮಾಹಿತಿ ಶಿಬಿರ ನಡೆಯಿತು. ಪ್ರತಿಷ್ಠಾನದ ಕಾರ್ಯದರ್ಶಿಯಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಶಾಲಾ ಶಿಕ್ಷಕ, ಶಿಕ್ಷಕಿಯರು ಮತ್ತು ಮಕ್ಕಳಿಗೆ ದಂತ ಆರೋಗ್ಯದ ರಕ್ಷಣೆ ಹಾಗೂ ಹಲ್ಲಿನ ಸ್ವಾಸ್ಥ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಬಾಯಿ ನಮ್ಮ ದೇಹದ ಹೆಬ್ಬಾಗಿಲು ಇದ್ದಂತೆ. […]

Read More

ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ. ಸುಮಾರು 30ರಿಂದ 35 ವರ್ಷದ ಹೊತ್ತಿಗೆ […]

Read More

“ರಾಷ್ಟ್ರೀಯ ದಂತ ವೈದ್ಯರ ದಿನ ಮಾರ್ಚ್ 6” ಇದರ ಅಂಗವಾಗಿ ನಗರದ ಗೋರಿಗುಡ್ಡದಲ್ಲಿರುವ ಕಿಟ್ಟೆಲ್ ಮೆಮೋರಿಯಲ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ದಿನಾಂಕ : 06-03-2018ನೇ ಮಂಗಳವಾರದಂದು ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಡಾ|| ಮುರಲೀ ಮೋಹನ್ ಚೂಂತಾರು ಭಾಗವಹಿಸಿದ್ದರು. ಮಕ್ಕಳಿಗೆ ಹಲ್ಲಿನ ಆರೋಗ್ಯದ ರಕ್ಷಣೆಯ ಬಗ್ಗೆ, ಹಲ್ಲುಜ್ಜುವ ವಿಧಾನದ ಬಗೆ ಮತ್ತು ದಂತ ಚೂರ್ಣದ ಬಗೆಗಿನ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು […]

Read More

ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ ಬೆಳೆದಲ್ಲಿ ಉಂಟಾಗುವ ವಕ್ರದಂತ ಸಮಸ್ಯೆ ಬರೀ ಮುಖದ ಸೌಂದರ್ಯವನ್ನು ಹಾಳುಗೆಡುವುದಲ್ಲದೆ, ವ್ಯಕ್ತಿಯ ಆತ್ಮವಿಶ್ವಾಸಕ್ಕೆ ಕೊಡಲಿಯೇಟು ನೀಡಿ ಆತನ ಮಾನಸಿಕ ಬೆಳವಣಿಗೆಗೂ ಮಾರಕವಾಗುವ ಸಾಧ್ಯತೆ ಇರುತ್ತದೆ. ಅತ್ತ ಸರಿಯಾಗಿ ಹಲ್ಲನ್ನು ಶುಚಿಗೊಳಿಸಲಾಗದೆ ಬಾಯಿವಾಸನೆ, ವಸಡಿನಲ್ಲಿ ರಕ್ತ, ಇತ್ತ ಸರಿಯಾಗಿ […]

Read More

ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ ನೆಲೆಸಿ ಸಾಕಷ್ಟು ಸಂಪಾದನೆ ಮಾಡುವ ಅವಕಾಶ ಇದ್ದರೂ, […]

Read More

ಕ್ಯಾನ್ಸರ್ ಎನ್ನುವುದು ವಿಶ್ವದ ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ 2ನೆ ಅಗ್ರಸ್ಥಾನವನ್ನು (ಮೊದಲಸ್ಥಾನ ಹೃದಯಾಘಾತ) ಅಲಂಕರಿಸಿದೆ. ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ಅರ್ಬುದ ರೋಗ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಕೊಟ್ಯಾಂತರ ಮಂದಿ ಕ್ಯಾನ್ಸರ್‍ನಿಂದಾಗಿ ಸಾಯುತ್ತಿದ್ದಾರೆ. ಸರಿಸುಮಾರು ವರ್ಷದಲ್ಲಿ 15 ಮಿಲಿಯನ್ ಮಂದಿ ಕ್ಯಾನ್ಸರ್‍ನಿಂದಾಗಿ ಬಳಲುತ್ತಿದ್ದಾರೆ ಮತ್ತು 8 ಮಿಲಿಯನ್ ಮಂದಿ ಸಾವನ್ನಪ್ಪುತ್ತಿದ್ದಾರೆ. ಬಾಯಿ,ಗಂಟಲು, ಶ್ವಾಸಕೋಸ, ಕರುಳಿನ ಕ್ಯಾನ್ಸರ್ ಮತ್ತು ಪ್ರೋಸ್ಟೆಟ್ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿರುತ್ತದೆ. ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಮತ್ತು ಜನನಾಂಗ (ಸರ್ವಿಕ್ಸ್ ಅಂದರೆ ಗರ್ಭಕೋಶದ ಕುತ್ತಿಗೆ)ದ ಕ್ಯಾನ್ಸರ್ […]

Read More

ಹಲ್ಲು ಮೊಳೆಯುವ ಸಮಯಹಲ್ಲು ಮೊಳೆಯುವ ಸಮಯಮೊನ್ನೆದಿನ ತಾಯಿಯೊಬ್ಬಳು ತನ್ನ ಮಗುವನ್ನು ದಂತ ಚಿಕಿತ್ಸಾಲಯಕ್ಕೆ ಕರೆತಂದು ಕಳೆದರೆಡು ದಿನಗಳಿಂದ ಮಗು ಪದೇ ಪದೇ ಅಳುತ್ತ್ತಿದೆ. ಕೈಗೆ ಸಿಕ್ಕಿದ ಎಲ್ಲಾ ವಸ್ತುಗಳನ್ನು ಬಾಯಿಗೆ ತುರುಕುತ್ತದೆ ಮತ್ತು ನಿನ್ನೆಯಿಂದ ಬೇಧಿ ಬೇರೆ ಶುರುವಾಗಿದೆ. ಕೆಳಗಿನ ದವಡೆಯ ಮೇಲ್ಬಾಗದ ವಸಡು ಕೆಂಪಾಗಿದೆ ಎಂದು ಒಂದೇ ಉಸಿರಿನಲ್ಲಿ ಹೇಳಿದ್ದರು. ಆ ಮಗುವಿನ ವಯಸ್ಸು 6 ರಿಂದ 8 ತಿಂಗಳು ಇರಬಹುದು. ಇದು ಹೆಚ್ಚಿನ ಎಲ್ಲಾ ತಾಯಂದಿರು ಮಕ್ಕಳಲ್ಲಿ ಕಂಡುಬರುವ ಸಹಜವಾದ ಪ್ರತಿಕ್ರಿಯೆ ಸಾಮಾನ್ಯವಾಗಿ ಮಕ್ಕಳಲ್ಲಿ […]

Read More